ಹುಬ್ಬಳ್ಳಿ: ಈಶ್ವರ ನಗರದಲ್ಲಿರುವ ವೈಷ್ಣವಿ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ.
ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಕೊಲೆಯಾದ ಅರ್ಚಕ. ದುಷ್ಕರ್ಮಿಗಳು ಚಾಕುವಿನಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಒಂದು ವರ್ಷದ ಹಿಂದೆ ಅರ್ಚಕನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿತ್ತು ಎಂಬ ಮಾಹಿತಿ ತಿಳಿದು ಬಂದಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ಅರ್ಚಕ ಬದುಕುಳಿದಿದ್ದರು ಎನ್ನಲಾಗಿದೆ. ಪ್ರಕರಣ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

