Ad

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ದರ್ಶನ್ ಮತ್ತು ಸಹಚರರು ನ್ಯಾಯಾಲಯಕ್ಕೆ ಹಾಜರು

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.

Ad
300x250 2

ಕೊಲೆ ಪ್ರಕರಣದ ಆರೋಪದಲ್ಲಿ ಪೊಲೀಸರು ದರ್ಶನ್‌ ಮತ್ತು ಅವರ ಸಹಚರರನ್ನು ಜೂನ್ 11ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಕಸ್ಟಡಿಗೆ ಪಡೆದಿದ್ದರು. ಇಂದು ಮಧ್ಯಾಹ್ನ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

ಮುಂದಿನ ಕ್ರಮದ ಬಗ್ಗೆ ಕೋರ್ಟ್‌ ತೀರ್ಪು ನೀಡಲಿದೆ. ಹೀಗಾಗಿ ದರ್ಶನ್‌ ಅವರಿಗೆ ಇಂದಿನ ದಿನ ನಿರ್ಣಾಯಕವಾಗಲಿದೆ. ಮಧ್ಯಾಹ್ನದ ವೇಳೆಗೆ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರು ಪಡಿಸಲಾಗುವುದು ಎಂದು ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಬಹುತೇಕ ದರ್ಶನ್ ಮತ್ತು ಸಹಚರರು ಜೈಲು ಸೇರುವ ಸಾಧ್ಯತೆ ಎನ್ನಲಾಗಿದೆ.

 

 

 

 

 

Ad
Ad
Nk Channel Final 21 09 2023
Ad