ಭಟ್ಕಳ: ತಾಲೂಕಿನ ಗುಳ್ಮಿ ಲಕ್ಕೀ ಶ್ಯಾವಿಗೆ ಫ್ಯಾಕ್ಟರಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಗ್ರಾಮೀಣ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.
ಬಂಧಿತರು ಚೌಥನಿ ನಿವಾಸಿ ಸಯ್ಯದ್ ಅಕ್ರಮ, ಗಾಂಜಾ ಸೇವನೆಯ ಅಮಲಿನಲ್ಲಿ ವಿಚಿತ್ರವಾಗಿ ವರ್ತಿಸುತ್ತಿರುವುದು ಪೊಲೀಸರಿಗೆ ಗೋಚರವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಠಾಣಾ ಪೊಲೀಸರು ಅವನನ್ನು ವಶಕ್ಕೆ ಪಡೆದರು. ಇದೇ ವೇಳೆ ಅದೇ ಪ್ರದೇಶದ ಬಿಲಾಲಖಂಡ ಗುಳ್ಮಿ ನಿವಾಸಿ ಮಹಮ್ಮದ್ ಅಬೀದ್ ಕೂಡ ಗಾಂಜಾ ಸೇವನೆ ಮಾಡಿದ ಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದು ಇಬ್ಬರನ್ನೂ ವಶಕ್ಕೆ ಪಡೆದು ಬಂಧನಕ್ಕೊಳಪಡಿಸಿದರು.
ಘಟನೆಯ ಹಿನ್ನೆಲೆಯಲ್ಲಿ ಗ್ರಾಮೀಣ ಠಾಣೆಯ ಅಪರಾಧ ವಿಭಾಗದ ಪಿಎಸೈ ಭರಮಪ್ಪ ಬೆಳಗಲಿ ಇಬ್ಬರ ಮೇಲೂ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿ ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶ ನೀಡಿದ್ದಾರೆ.

