ಹಾಸನ : ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ ಮಾಡಿದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಹೊಯ್ಸಳ ನಗರದ ಬಡಾವಣೆಯಲ್ಲಿ  ಇಬ್ಬರ ದೇಹದ ಒಳಗೆ ಗುಂಡು ಹೊಕ್ಕಿತ್ತು.

ಹೌದು. . . ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ವ್ಯಕ್ತಿಯೊಬ್ಬನ ಹತ್ಯೆ ಮಾಡಿ ಮತ್ತೊಬ್ಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಇಂದು ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಎಸ್​ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್​ಎಸ್​​ಎಲ್​ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಘಟನೆ ಬಗ್ಗೆ ಮಾಹಿತಿ ನೀಡಿದ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿಸಿದರು.