Bengaluru 29°C
Ad

ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಬಲಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ನಿಹಾಮಾ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೇನೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರ ಗುರುತು ಮತ್ತು ಸಂಘಟನೆಯನ್ನು ಪತ್ತೆ ಮಾಡಲಾಗುತ್ತಿದೆ.

Ad
Ad
Nk Channel Final 21 09 2023
Ad