ಹುಬ್ಬಳ್ಳಿ: ಯುವತಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಯುವಕ ಮಹಿಳೆಗೆ ಚಾಕುವಿನಿಂದ ಇರಿದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಹೇಶ್ ಎಂಬ ಯುವಕ ಈ ಕೃತ್ಯವೆಸಗಿದ್ದು, ನೀಲಾ ಹಡಪದ ಚಾಕು ಇರಿತಕ್ಕೆ ಒಳಗಾಗಿರುವ ಮಹಿಳೆ. ಘಟನೆ ಬೆನ್ನಲ್ಲೇ ಈ ಮಹೇಶ್‌ ಪರಾರಿಯಾಗಿದ್ದ, ತಕ್ಷಣ ಅಲರ್ಟ್ ಆದ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸಿ ವಶಕ್ಕೆ ಪಡೆದಿದ್ದಾರೆ.

ಯುವತಿಯನ್ನು ಚುಡಾಯಿಸಬೇಡ ಎಂದು ಮಹೇಶ್ ಗೆ ಕೇವಲ ಬುದ್ಧಿಮಾತು ಹೇಳಿದ ಮಾತ್ರಕ್ಕೆ ನೀಲಾ ಹಡಪದ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಸದ್ಯ ಮಹಿಳೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.