ಮೈಸೂರು : ಬಾಳೆ ಗಿಡಕ್ಕೆ ನೇಣು ಬಿಗಿದುಕೊಂಡು  ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಶಶಿಕಲಾ (38) ಮೃತ ದುರ್ದೈವಿ.

ಗಟ್ಟವಾಡಿ ಗ್ರಾಮದ ನಂಜುಂಡಪ್ಪ @ ಸಿದ್ದಲಿಂಗಪ್ಪ ಎಂಬುವರ ಬಾಳೆ ತೋಟದಲ್ಲಿ ಶವ ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಕಬ್ಬಿಣದ ರಾಡು, ಕಾರಿನ ಮ್ಯಾಟ್ ಸೇರಿ ಹಲವು ವಸ್ತುಗಳು ಸಿಕ್ಕಿವೆ. ಖಾಸಗಿ ಕಂಪನಿಯಲ್ಲಿ ಶಶಿಕಲಾ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ ಬರುತ್ತಿದ್ದರು.

ಮಹಿಳೆಯ ಹುಡುಕಾಟದ ಜೊತೆಗೆ ಆಕೆಯ ಮೊಬೈಲ್‌ಗೆ ನಿರಂತರವಾಗಿ ಕರೆ ಮಾಡಿದ್ದಾರೆ. ಆದರೆ, ಈ ವೇಳೆ ಮಹಿಳೆಯ ಕುಟುಂಬಸ್ಥರಿಗೆ ಕೆ ಮಾಡಿದ ಬಾಳೆ ತೋಟದ ಮಾಲೀಕ ನಂಜುಂಡಪ್ಪ ತನ್ನ ಬಾಳೆ ತೋಟದಲ್ಲಿ ನಿಮ್ಮ ಮನೆಯ ಮಹಿಳೆ ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿಸಿದ್ದಾನೆ. ಗ್ರಾಮಸ್ಥರು ತೆರಳಿ ಅಲ್ಲಿ ಪರಿಶೀಲನೆ ಮಾಡಿದ್ದಾರೆ. ನಂತರ ನಂಜುಂಡಪ್ಪನ ಮೇಲೆ ಅನುಮಾನ ವ್ಯಕ್ತಪಡಿಸಿ, ಆತನೆಲ್ಲಿ ಎಂದು ಹುಡುಕಿದರೆ ಗ್ರಾಮದಿಂದ ಪರಾರಿ ಆಗಿದ್ದಾರೆ. ಮಹಿಳೆಯ ಕುಟುಂಬಸ್ಥರು ಬಾಳೆ ತೊಟದ ಮಾಲೀಕ ನಂಜುಂಡಪ್ಪ ವಿರುದ್ಧ ದೂರು ನೀಡಿದ್ದಾರೆ.

ನಂಜನಗೂಡು ಡಿವೈಎಸ್‌ಪಿ ರಘು ಅವರು ಬಾಳೆ ತೋಟಕ್ಕೆ ಭೇಟಿ ನೀಡಿ, ಮೃತ ಮಹಿಳೆ ಶವ ಸಿಕ್ಕ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ.ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.