ಬೆಂಗಳೂರು: ಜ್ಯೂಸ್ ಗೆ ಮತ್ತು ಬರುವ ಡ್ರಗ್ಸ್ ಹಾಕಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಘಟನೆ ನಡೆದಿದ್ದು, ಇದೀಗ ಆರೋಪಿಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಆರೋಪಿಯನ್ನು ಆಂಧ್ರ ಪ್ರದೇಶದ ಕಡಪ ಮೂಲದ ಲಕ್ಷ್ಮಿ ರೆಡ್ಡಿ ಎಂದು ಗುರುತಿಸಲಾಗಿದ್ದು, ಆರೋಪಿ ಕ್ರೆಡಿಟ್ ಕಾರ್ಡ್ ಮಾಡಿಸಲು ಬ್ಯಾಂಕ್ ವೊಂದಕ್ಕೆ ಹೋಗಿದ್ದ ವೇಳೆ ಕಸ್ಟಮರ್ ಕೇರ್ ಆಗಿದ್ದ ಯುವತಿ ಜೊತೆ ಸ್ನೇಹ ಬೆಳೆಸಿ ಹೊಟೇಲ್ವೊಂದಕ್ಕೆ ಕರೆದೊಯ್ದಿದ್ದ,
ಈ ವೇಳೆ ಜ್ಯೂಸ್ ನಲ್ಲಿ ಮತ್ತು ಬರುವ ಡ್ರಗ್ಸ್ ಅನ್ನು ಮಿಶ್ರಣ ಮಾಡಿ ಆಕೆಗೆ ಕುಡಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಅಲ್ಲದೇ ಅದನ್ನು ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುವ ಮೂಲಕ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.
ಸದ್ಯ ಸಂತ್ರಸ್ತ ಮಹಿಳೆ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಆರೋಪಿ ಕೃಷ್ಣ ರೆಡ್ಡಿಯಿಂದ ಬೇಸತ್ತು ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.