Showing 20 of 577 posts • Page 14 of 29
ಬಿಯರ್ ಬಾಟಲಿಯಿಂದ ಕುತ್ತಿಗೆಗೆ ಇರಿದು ಹೊಟೇಲ್ ಕಾರ್ಮಿಕನನ್ನು ಕೊಲೆಗೈದ ಘಟನೆ ಮಣಿಪಾಲದ ಬ್ಯಾಕಸಿನ್ ರೆಸ್ಟೊರೆಂಟ್ ನ ಮುಂಭಾಗದ ಅನಂತ ಕಲ್ಯಾಣ ಮಾರ್ಗದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ.
ಒಂದೂವರೆ ವರ್ಷಗಳ ಹಿಂದೆ ಬೇಕಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅನಿವಾಸಿ ಭಾರತೀಯ ಉದ್ಯಮಿಯ ಸಾವಿನ ಪ್ರಕರಣ ಕೊಲೆ ಎಂದು ಸಾಬೀತಾಗಿದ್ದು,
ಪತಿಯಿಂದಲೇ ಪತ್ನಿಯ ಕೊಲೆಯಾಗಿರುವ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಕತ್ತು ಕೊಯ್ದು ಪತ್ನಿಯನ್ನು ಪಾಪಿ ಪತಿ ಕೊಲೆ ಮಾಡಿದ್ದಾನೆ. ಶೃತಿ ಕೊಲೆಯಾದ ಗೃಹಿಣಿ.
ಅಕ್ರಮವಾಗಿ ಶ್ರೀಗಂಧದ 3 ತುಂಡು, 6 ಜೀವಂತ ಆಮೆಯನ್ನು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಸಿಬ್ಬಂದಿ ಬಂಧಿಸಿರುವ ಘಟನೆ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಪ್ರದೇಶ ಮದ್ದೂರು ವಲಯದಲ್ಲಿ ನಡೆದಿದೆ.
ಮೈಕ್ರೋ ಫೈನಾನ್ಸ್ ನವರು ಸಾಲ ಮರುಪಾವತಿಸುವಂತೆ ನೀಡುತ್ತಿದ್ದ ಕಿರುಕುಳ ತಾಳಲಾರದೇ ಕಾಳಿನ ಕ್ರಿಮಿನಾಶಕ ಮಾತ್ರೆ ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆಯ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿ ನಗನಗದು ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇತ್ತೀಚೆಗೆ ಮುಲ್ಕಿ ಪಕ್ಷಿಕೆರೆಯಲ್ಲಿ ನಡೆದ ಕಾರ್ತಿಕ್ ಭಟ್ ಆತ್ಮಹತ್ಯೆ ಮತ್ತು ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಕಾರ್ತಿಕ್ ಭಟ್ ತಾಯಿ ಮತ್ತು ಅಕ್ಕನಿಗೆ ದ.ಕ ಜಿಲ್ಲಾ ಸೆಶನ್ಸ್ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಪತ್ನಿಯನ್ನು ಕೊಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್ಗಢದ ದುರ್ಗ್ನಲ್ಲಿ ನಡೆದಿದೆ.
ನಕ್ಸಲ್ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಘಟನೆ ನಡೆದ ಮನೆಯ ಮಾಲೀಕ ಜಯಂತ್ ಗೌಡರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿದರು.
ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾದ ಕುಖ್ಯಾತ ರೌಡಿಶೀಟರ್ನನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.
ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.
ಮಹಿಳಾ ಪೊಲೀಸನ್ನು ಪತಿ ಇರಿದು ಕೊಲೆಗೈದ ಘಟನೆ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆ ನಡೆದಿದೆ.
ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ.
ಸ್ವಿಮ್ಮಿಂಗ್ ಪೂಲ್ ನಲ್ಲಿ ಮೂವರು ಯುವತಿಯರು ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಉದ್ಯಮಿಯೊಬ್ಬರು ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವುಕ್ಸಿ ನಗರದ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ ಪರಿಣಾಮ 8 ಜನ ಸಾವನ್ನಪ್ಪಿದ್ದು, 17 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಅತೀ ವೇಗವಾಗಿ ಬಂದ ಥಾರ್ ಜೀಪ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ನಡೆದಿದೆ.
ತನ್ನ ಮಗು ಹೃದಯ್ ಹಾಗೂ ಪತ್ನಿ ಪ್ರಿಯಂಕಾ ಅವರನ್ನು ಕೊಂದು ಬೆಳ್ಳಾಯರು ಗ್ರಾಮದ ರೈಲ್ವೆ ಬ್ಲ್ಯಾಕ್ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆಚ್ಚಿನ ಕೈಸಾಲವನ್ನು ಕಾರ್ತಿಕ್ ಮಾಡಿಕೊಂಡಿದ್ದ ಎನ್ನುವ ಅಂಶ ಬೆಳಕಿಗೆ ಬರುತ್ತಲಿದೆ. ಆದರೆ ಈ ಬಗ್ಗೆ ಯಾರೊಬ್ಬರೂ ಪೊಲೀಸ್ ದೂರು ನೀಡಲು ಮುಂದೆ ಬರುತ್ತಿಲ್ಲ.
ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.