Showing 20 of 577 posts • Page 15 of 29
ಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ.
ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಕಾಸರಗೋಡು ಬಡಾಜೆಯ ಮೊಹಮ್ಮದ್ ಆಸೀಫ್ ಎಂಬವರ ಮೇಲೆ ತಲಪಾಡಿ ಗ್ರಾಮದ ಕೆಸಿರೋಡ್-ಉಚ್ಚಿಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಮಾರಕಾಯುಧಗಳಿಂದ ದಾಳಿ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
12 ಗಂಟೆಯೊಳಗೆ ಮೂರು ಕೊಲೆಗಳು ವರದಿಯಾಗಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಅಳಿಯ ಕಾರ್ತಿಕ್ ಗೆ ವಿದೇಶಕ್ಕೆ ಹೋಗುವಂತೆ ಅವರ ತಾಯಿ ತುಂಬಾ ಒತ್ತಾಯ ಮಾಡ್ತಿದ್ರು, ಬೇರೆ ಮನೆ ಮಾಡಿ ಎಂದು ಮೂರು ನಾಲ್ಕು ಸಲ ಹೇಳಿದ್ದಾರೆ.
ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರ ವಲಯ ಪಕ್ಷಿಕೆರೆಯಲ್ಲಿ ನಡೆದಿದೆ
2021ರಲ್ಲಿ ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಕೆಲವು ಸಮಯದ ಹಿಂದೆ ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಇಬ್ಬರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಡೆಮುಲ್ ಗ್ರಾಮದ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಗಿಡಿಗೆರೆ ದಖರ್ಸ್ ಕುಡಿಯುವ ನೀರಿನ ಟ್ಯಾಂಕ್ ಬಳಿ ಅ.27ರಂದು ಪತ್ತೆಯಾಗಿದ್ದ ತಾರಾನಾಥ್ (39) ಕೊಲೆ ಪ್ರಕರಣವನ್ನು ಭೇದಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಕಂಬಿ ಎಣಿಸುತ್ತಿರುವ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ.
ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ.
ಮಂಗಳೂರು: ಮುಸ್ಲಿಂ ಯುವಕರ ಗುಂಪಿನ ಮಧ್ಯೆ ರಣಭೀಕರ ತಲ್ವಾರು ಕಾಳಗ ನಡೆದಿದ್ದು, ಪೂರ್ವದ್ವೇಷದ ಹಿನ್ನೆಲೆಯಲ್ಲಿ ಯುವಕರ ಮೇಲೆ ರೌಡಿಶೀಟರ್ ಗಳಿಂದ ಯದ್ವಾತದ್ವಾ ತಲ್ವಾರ್ ದಾಳಿ ಮಾಡಿದ್ದು, ನಡುಬೀದಿಯಲ್ಲಿ ಯುವಕರ ಅಟ್ಟಾಡಿಸಿ ತಲ್ವಾರಿನಲ್ಲಿ ರೌಡಿ ಗ್ಯಾಂಗ್ ಕೊಚ್ಚಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ತಲ್ವಾರ್ ದಾಳಿಯಲ್ಲಿ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದ್ದು, ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ಮಾರಕ ದಾಳಿ […]
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ ಬಳಿಕ ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಉಡುಪಿಯಲ್ಲಿ ನಿನ್ನೆ ನಡೆದಿತ್ತು.
ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ಮಾರಕಾಸ್ತ್ರ ಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಸೋಮವಾರ ನಡೆದಿದೆ.
ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
21 ವರ್ಷದ ವಿಕಲಚೇತನ ಮಹಿಳೆ ಮೇಲೆ ಅತ್ಯಾಚಾರವೆಸಗಿದ 61 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕೋಟಾದಲ್ಲಿ 61 ವರ್ಷದ ರಮಾನಂದ ಐತಾಳ್ ಎಂಬ ವ್ಯಕ್ತಿ 21 ವರ್ಷದ ಅಂಗವಿಕಲ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಇಬ್ಬರು ಚಿಕ್ಕ ಮಕ್ಕಳು ಮತ್ತು ಅವರ ಪೋಷಕರು ಸೇರಿದಂತೆ ನಾಲ್ವರ ಶವಗಳು ಸೋಮವಾರ ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಬಳಿಯ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಪತ್ತೆಯಾಗಿವೆ.
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಭಾನುವಾರ ರಾತ್ರಿ ಪುಣೆ ಮೂಲದ ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ.