Showing 20 of 577 posts • Page 28 of 29
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮಸೀದಿಯ ಮೌಲ್ವಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮೌಲ್ವಿ ಅಬ್ದುಲ್ ರಹೆಮಾನ್ ಎಂದು ಗುರುತಿಸಲಾಗಿದೆ.
2008ರಲ್ಲಿ ಸರಪಂಚ್ ಒಬ್ಬರನ್ನು ಹತ್ಯೆಗೈದಿದ್ದ ಆರೋಪಿಯನ್ನು 16 ವರ್ಷಗಳ ಬಳಿಕ ಪೊಲೀಸರು ಬಂಧಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಹೊಡೆದು ಕೊಂದಿರುವ ಘಟನೆ ಜೊಲ್ಲಾಪುರದ ಕಲಾಂಬಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬರ್ತ್ ಡೇ ಪಾರ್ಟಿಯ ಸಂಭ್ರಮದಲ್ಲಿ ಮುಳುಗಿದ್ದವರ ಮೇಲೆ ಬರೋಬ್ಬರಿ 27 ಬಾರಿ ಗುಂಡಿನ ದಾಳಿ ನಡೆದಿರುವ ಘಟನೆ ಅಮೆರಿಕಾದ ಓಹಿಯೋ ಪ್ರಾಂತ್ಯದ ಅಕ್ರಾನ್ನಲ್ಲಿ ನಡೆದಿದೆ.
ಗುತ್ತಿಗೆದಾರನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಬಂಂಧಿಸಿದಂತೆ ಆರೋಪಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ನಗರದ ಸೊಲ್ಲಾಪುರ ಬ್ರಿಡ್ಜ್ ಬಳಿ ಗಾಂಜಾ ಹಾಗೂ ಮಾದಕ ಪದಾರ್ಥಗಳನ್ನು ಬೈಕ್ಗಳ ಮೇಲೆ ತಂದಿಟ್ಟುಕೊಂಡು ಮಾರಾಟ ಮಾಡಲು ಮುಂದಾಗಿದ್ದ ನಾಲ್ವರನ್ನು ಆದರ್ಶ ನಗರ ಪೊಲೀಸರು ಬಂಧಿಸಿದ್ದಾರೆ.
ಪಾವಗಡದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಬಳಿಕ ಸರ್ಕಾರದಿಂದ ಪರಿಹಾರ ಘೋಷಣೆಯಾಗಿದೆ.
ಪ್ರತಾಪ್ ನಗರದಲ್ಲಿ ಗುರುವಾರ ತಡರಾತ್ರಿ ಮನೆ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಯುವಕನಿಗೆ ಸ್ಥಳೀಯರು ದೊಣ್ಣೆಗಳಿಂದ ಮನಬಂದಂತೆ ಥಳಿಸಿದ್ದರಿಂದ ಆತ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ನಾಲ್ವರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿದ್ದ ಆರೋಪಿಯನ್ನು ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಿ ಕೊಲೆಯ ಹಿಂದಿನ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕಲಾಗಿತ್ತು.
ಕೊಲೆ ಮಾಡುವುದಕ್ಕೆ ಕಾರಣಗಳೇ ಬೇಕಾಗಿಲ್ಲ. ಇತ್ತೀಚೆಗಿನ ಮಾತೆತ್ತಿದ್ದರೆ ಕಾರಣವಲ್ಲದ ಕಾರಣಕ್ಕೆ ಕೊಲೆಗಳು ನಡೆಯುತ್ತಿರುವುದು ಹೆಚ್ಚಾಗಿದ್ದು, ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊಲೆ ಪ್ರಕರಣಗಳು ಹೆಚ್ಚುತ್ತಿವೆ.
ಪ್ರೀತಿಸಲು ನಿರಾಕರಿಸಿದಕ್ಕೆ ಯುವಕನೋರ್ವ ಯುವತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಏಳೂರು ಜಿಲ್ಲೆಯಲ್ಲಿ ನಡೆದಿದೆ.
ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ತಲವಾರು ದಾಳಿ ನಡೆದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ನಡುರಸ್ತೆಯಲ್ಲೇ ಯುವತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಧಾರವಾಡ ತಾಲೂಕಿನ ಕನಕೂರ ಗ್ರಾಮದಲ್ಲಿ ಘಟನೆ ನಡೆದಿದೆ.
ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಹಿಂದೂ ಯುವಕನ ಮೇಲೆ ಅನ್ಯ ಕೋಮಿನ ಪುಂಡರು ಹಲ್ಲೆ ನಡೆಸಿದ ಪ್ರಕರಣ ಮಂಡ್ಯ ಜಿಲ್ಲೆಯ ಬೆಳ್ಳೂರು ಪಟ್ಟಣದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್ಐ ಅನ್ನು ಅಮಾನತು ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರೊಬ್ಬರು 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದು ಆ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ.
ಪಾಟ್ನಾದ ಕಾಲೇಜು ಆವರಣದಲ್ಲೇ ಮುಸುಕುಧಾರಿಗಳು ವಿದ್ಯಾರ್ಥಿಯನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹರ್ಷ್ ಬಿಎನ್ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ತಾಯಿ ತನ್ನ 11 ವರ್ಷದ ಮಗನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪತಿಯೊಬನ್ಬ ತನ್ನ ಪತ್ನಿಯನ್ನೇ ಭೀಕರವಾಗಿ ಕೊಲೆಮಾಡಿದ್ದು ಅಂಗಾಂಗವನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ.
ಯುವತಿಯರ ಫೋಟೋಗಳನ್ನು ನಗ್ನವಾಗಿ ಎಡಿಟ್ ಮಾಡಿ ಅವರ ಮೇಲೆ ಲೈಂಗಿಕ ಅತ್ಯಾಚಾರವೆಸಗುತ್ತಿದ್ದ ಗ್ಯಾಂಗ್ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.