Showing 17 of 577 posts • Page 29 of 29
ತನ್ನ ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧದಿಂದ ದೂರ ಇರು ಎಂದಿದ್ದಕ್ಕೆ ಅತ್ತಿಗೆ ಪ್ರಿಯಕರ ಮೈದುನನ್ನೆ ಕಲ್ಲಿನಿಂದ ಜಜ್ಜಿ ಕೊಂದಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ
ದುಷ್ಕರ್ಮಿಗಳ ಗುಂಪೊಂದು ವ್ಯಕ್ತಿಯೊಬ್ಬನನ್ನು ಕಟ್ಟಡದ ಟೆರೇಸ್ ನಿಂದ ಎಸೆದು ಹಲ್ಲೆ ನಡೆಸಿದ ಘಟನೆ ನಗರದ ಮಡೆಗಂಜ್ ಪ್ರದೇಶದಲ್ಲಿ ನಡೆದಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಧ್ವನಿ ಬದಲಿಸುವ ಆ್ಯಪ್ ಮೂಲಕ ವ್ಯಕ್ತಿಯೊಬ್ಬ ಮಹಿಳಾ ಕಾಲೇಜು ಉಪ ನ್ಯಾಸಕಿಯಂತೆ ಮಾತನಾಡಿ 7 ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ಬೆಳಕಿಗೆ ಬಂದಿದೆ.
ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ನಡೆದಿದೆ.
ವಾಹನ ಓವರ್ ಟೆಕ್ ಮಾಡುವ ವಿಚಾರದಲ್ಲಿ ಟಾಟಾ ಏಸ್ ವಾಹನ ಚಾಲಕ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕನ ನಡುವೆ ಜಗಳ ನಡೆದು ಬಸ್ ಚಾಲಕನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ
ಕಾರು ಮಾರಾಟ ವಿಚಾರವಾಗಿ ಎರಡು ತಂಡಗಳ ತಲವಾರು ಹಿಡಿದುಕೊಂಡು ಹೊಡೆದಾಡಿಕೊಂಡ ಘಟನೆ ನಗರದ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ. ಈ ಭಯಾನಕ ಗ್ಯಾಂಗ್ ವಾರ್ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು ಸದ್ಯ ವೈರಲ್ ಆಗಿದೆ.
ವೈದ್ಯಕೀಯ ಚಿಕಿತ್ಸೆ ಸಲುವಾಗಿ ಕೋಲ್ಕತಾಗೆ ಆಗಮಿಸಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನರ್ ಅವರ ಹತ್ಯಾ ಪ್ರಕರಣದಲ್ಲಿ ಆಘಾಕರಾರಿ ಅಂಶವೊಂದು ಬೆಳಕಿಗೆ ಬಂದಿದೆ.
ವ್ಯಕ್ತಿಯೊಬ್ಬ ತನ್ನ ಗರ್ಭಿಣಿ ಹೆಂಡತಿಯ ಹೊಟ್ಟೆಯಲ್ಲಿ ಗಂಡು ಅಥವಾ ಹೆಣ್ಣು ಮಗುವಿದೆಯೋ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆಯನ್ನು ಸೀಳಿದ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ 2020 ರಲ್ಲಿ ನಡೆದಿತ್ತು.
ನಗರದಲ್ಲಿ ನಡೆದ ಯುವತಿ ಪ್ರಭುದ್ದ್ಯಾ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಅಪ್ರಾಪ್ತ ಬಾಲಕನೊಬ್ಬ ಕೇವಲ 2 ಸಾವಿರ ರೂಪಾಯಿ ವಿಚಾರಕ್ಕೆ ಯುವತಿಯ ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಪೋಷಕರು ಸಾಲ ವಾಪಾಸ್ ಕೊಡದಿದ್ದಕ್ಕೆ ಅವರ 13 ವರ್ಷದ ಮಗಳ ಮೇಲೆ ನಾಲ್ವರು ಲೈಂಗಿಕ ದೌರ್ಜನ್ಯ ನಡೆಸಿ, ಮೊಬೈಲ್ನಲ್ಲಿ ವಿಡಿಯೋ ಮಾಡಿದ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ದಾರಿ ಬಿಡಿ ಎಂದಿದ್ದಕ್ಕೆ ಯೋಧನ ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ಬಳಿ ನಡೆದಿದೆ.
ಕುಡಿದ ನಶೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡೆ ಹಾಗೂ ನಟಿ ವಿದ್ಯಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ, ಪತಿ ನಂದೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ಹಾಡಹಗಲೇ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭಯಾನಕವಾಗಿ ಕೊಲೆ ಮಾಡಿರುವ ಘಟನೆ ಅಬ್ಬೆ ತುಮಕೂರಿನ ಹೊರವಲಯದಲ್ಲಿ ನಡೆದಿದೆ.
ಡಿವೈಎಸ್ಪಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ 2 ಬ್ಯಾಂಕ್ ಖಾತೆಯಿಂದ 15,98,761 ರೂ. ಖದೀಮರು ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಪ್ರೀತಿಸಿದ ಯುವಕನ ಮೇಲೆ ಯುವತಿಯ ಕುಟುಂಬಸ್ಥರು ಬಿಸಿ ನೀರು ಎರಚಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಸುಹೇಲ್ (27) ಎಂಬ ಯುವಕನ ಮೇಲೆ ಬಿಸಿ ನೀರು ಎರಚಲಾಗಿದೆ.