Showing 20 of 53 posts • Page 1 of 3
ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಅನ್ನು ಕಚ್ಚಿದ ಸಾಕುನಾಯಿಯೊಂದು ಸ್ಥಳದಲ್ಲೇ ಭೀಕರವಾಗಿ ಸ್ಫೋಟಗೊಂಡು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ (54) ಆತ್ಮಹತ್ಯೆ ಪ್ರಕರಣದಲ್ಲಿ ಶಾಲಾ ಸಹ ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್ಪಿ ಹಾಗೂ ಬಿಆರ್ಪಿ ಸೇರಿದಂತೆ ಒಟ್ಟು 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಸಹಶಿಕ್ಷಕರೊಂದಿಗೆ ಉಂಟಾಗಿದ್ದ ಕಲಹದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಯಪ್ಪ (55) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.
ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹಾಗೂ ಫೋಟೋ-ವಿಡಿಯೋಗಳನ್ನು ಚಿತ್ರೀಕರಿಸಿ ವೈರಲ್ ಮಾಡಿರುವ ಆರೋಪದಡಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಘಟನೆ ಸಂಬಂಧ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು ಎರಡೂ ಕ್ಷೇತ್ರಗಳಿಂದ ಒಟ್ಟು 34 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಈ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲಾದ ಘಟನೆ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.
ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ನಡೆದಿದೆ.
ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವುದು ದಾವಣಗೆರೆ ನಗರದ ಖಾಸಗಿ ವೈದ್ಯಕೀಯ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚು ಲಾಭಗಳಿಸಬಹುದು ಎಂಬ ಆಸೆ ತೋರಿಸಿ ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ದಾವಣಗೆರೆಯಲ್ಲಿ ನಡೆದಿದೆ.
ಕಸ ವಿಂಗಡಿಸಿ ಕೊಡುವಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆಯೊಂದು ದಾವಣಗೆರೆ ಜಿಲ್ಲೆಯ ಮೆಹಬೂಬ್ ನಗರದಲ್ಲಿ ನಡೆದಿದೆ.
ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ದುರ್ಗಾಂಬ ಬಸ್ಸು ಹುಲಿಕಲ್ ಘಾಟ್ ರಸ್ತೆಯ ಬದಿ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಪದವಿ ಪೂರೈಸಿ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
ರಾಟ್ ವೀಲರ್ ನಾಯಿ ದಾಳಿಗೆ ಮಹಿಳೆ ಬಲಿಯಾದ ಘಟನೆ ದಾವಣಗೆರೆ ಹೊರ ವಲಯದ ಹೊನ್ನೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ. ನಾಯಿ ದಾಳಿಯಿಂದ ಸಾವನ್ನಪಿದ ಮಹಿಳೆಯನ್ನು ಅನಿತಾ (38) ಎಂದು ಗುರುತಿಸಲಾಗಿದೆ.
ನಿರ್ಮಾಣ ಹಂತದ ಕಟ್ಟಡವೊಂದರ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಚಿನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ.
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ 3.75 ಲಕ್ಷ ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಫಸಲಿಗೆ ಬಂದಿದ್ದ 7.50 ಲಕ್ಷ ರೂ. ಮೌಲ್ಯದ ದಾಳಿಂಬೆಯನ್ನು ಕಳ್ಳತನ ಮಾಡಿರುವ ಘಟನೆ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ.