ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದಾವಣಗೆರೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಹೊತ್ತು ಶಾಮನೂರು ಶಿವಶಂಕರಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ.

ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ವೈದ್ಯರು ಶಾಮನೂರು ಅವರಿಗೆ ಫೇಸ್ ಮೇಕರ್ ಅಳವಡಿಕೆ ಮಾಡಿದ್ದಾರೆ.

ಮಾಹಿತಿ ಪ್ರಕಾರ. ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಕಾರಿನಲ್ಲೇ ದಾವಣಗೆರೆಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳಿವೆ.