ಧಾರವಾಡ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನ ಸಂಪರ್ಕ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ಹಾಸ್ಟೆಲ್‌ ಸೌಲಭ್ಯ ಒದಗಿಸಿ ಹಾಗೂ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್ಕಾರದ ವಿರುದ್ಧ ಹಾಗೂ ಸಚಿವ ಸಂತೋಷ ಲಾಡ್ ವಿರುದ್ಧ ಘೋಷಣೆ ಕೂಗುತ್ತ, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಮುತ್ತಿಗೆ ಹಾಕಿ, ಸಚಿವ ಸಂತೋಷ ಲಾಡ್ ಅನುಪಸ್ಥಿತಿಯಲ್ಲಿ ಅವರ ಕುರ್ಚಿಗೆ ಮನವಿ ಸಲ್ಲಿಸಿದರು.