ಹುಬ್ಬಳ್ಳಿ: ಹಳೇ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಿ ಭಾರತ ನಕ್ಷೆ ತಯಾರಿಸಿ ಯುವಕರು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿರುವ ಅಪರೂಪದ ಘಟನೆ ನಡೆದಿದೆ.
ಸ್ವಾತಂತ್ರ್ಯೋತ್ಸವದ ಹಿನ್ನಲೆ ಧಾರವಾಡ ಜಿಲ್ಲೆಯ ಕಲಘಟಗಿ ಯುವಕ ಸುನೀಲ್ ಕಮ್ಮಾರ ಎಂಬ ಯುವಕ ವಿಭಿನ್ನ ಪ್ರಯತ್ನ ಮಾಡಿದ್ದು ಹಳೇ ನಾಣ್ಯಗಳನ್ನು ಸಂಗ್ರಹ ಮಾಡಿ ಭಾರತ ನಕ್ಷೆ ತಯಾರಿಸಿ ಹೂವಿನ ಅಲಂಕಾರ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾನೆ. ಕಲಘಟಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಆಚರಣೆ ನೆರವೇರಿದೆ.

