ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮೈಸೂರಿಗೆ ತೆರಳಲಿದ್ದು, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯಲಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಕಾಂಗ್ರೆಸ್ನವರು ಪಾರ್ಟ್ ಟೈಂ ಹಿಂದೂಗಳು ಎಂದು ಲೇವಡಿ ಮಾಡಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಹಿಂದೂ ವಿರೋಧಿ ಪಕ್ಷ ಎಂದು ಆರೋಪ ಮಾಡಿದರು. ಕಾಂಗ್ರೆಸ್ನವರಿಗೆ ಕೋರ್ಟ್ ಮೇಲೆ ನಂಬಿಕೆ ಇದೆಯೋ ಇಲ್ವೋ ಗೊತ್ತಿಲ್ಲ. ಇದುವರೆಗೂ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿಲ್ಲ.
ಕಾಂಗ್ರೆಸ್ನವರು ಹೆಚ್ಡಿ ಕುಮಾರಸ್ವಾಮಿ ಮೇಲೆ ಆರೋಪ ಮಾಡುತ್ತಿದ್ದಾರೆ. 2018ರಲ್ಲಿ ನೀವೇ ಹೆಚ್ಡಿ ಕುಮಾರಸ್ವಾಮಿ ಅವರ ಕಾಲು ಹಿಡಿದು ಮುಖ್ಯಮಂತ್ರಿ ಮಾಡಿದ್ದೀರಿ, ಇವಾಗ ನಿಮಗೆ ಜ್ಞಾನೋದಯ ಆಯ್ತಾ ಎಂದು ವಾಗ್ದಾಳಿ ಮಾಡಿದರು. ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ ಎಂದು ಭವಿಷ್ಯ ಹೇಳಲ್ಲ. ಆದರೆ ನೈತಿಕವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

