ಹುಬ್ಬಳ್ಳಿ: ಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಎಲ್ಲೆಡೆ ಆಚರಿಸಲಾಗುತ್ತದೆ. ಅದೇ ರೀತಿ ತಾಲೂಕು ಆಡಳಿತದಿಂದ ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಆಗಸ್ಟ್ 14 ರಂದು ಸಂಜೆ 4 ಗಂಟೆಗೆ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ತಿಳಿಸಿದ್ದಾರೆ.

Image: Web
