ಧಾರವಾಡ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A9 ಆರೋಪಿ ಧನರಾಜ್‌ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಸೇರಿ ಆ ತಂಡದ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಸದಸ್ಯರನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

A9 ಆರೋಪಿಯಾಗಿರುವ ಧನರಾಜ್‌ ನನ್ನು ಬೆಂಗಳೂರು ಪೊಲೀಸರು ಭದ್ರತೆ ಮಧ್ಯೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದರು. ಇದರ ಜತೆಗೆ A14 ಆರೋಪಿಯಾಗಿರುವ ಪ್ರದೂಷ್‌ ನನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.