ಧಾರವಾಡ: ವಿಷ ಸೇವಿಸಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ.

ಭಾಗ್ಯಶ್ರೀ (38) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲದ ಭಾಗ್ಯಶ್ರೀ, ಮದುವೆಯಾದ ನಂತರ ತಮ್ಮ ಗಂಡನ ಊರಾದ ಧಾರವಾಡದಲ್ಲೇ ನೆಲೆಸಿದ್ದರು. ಸತಿ, ಪತಿ ನಡುವೆ ಆಗಾಗ ಬೇರೆ ಬೇರೆ ಕಾರಣಗಳಿಂದ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭಾಗ್ಯಶ್ರೀ, ಮನೆಯಲ್ಲಿದ್ದ ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ಈ ಸಂಬಂಧ ವಿದ್ಯಾಗಿರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821