ಧಾರವಾಡ: ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಸಾಬೀರ್ ಬಂಧಿತ ಆರೋಪಿ. ಧಾರವಾಡ ನಗರದ ಮರಾಠಾ ಕಾಲೋನಿಯ ಫಿಟನೆಸ್ ಫಸ್ಟ್ ಎಂಬ ಜಿಮ್‌ನಲ್ಲಿದ್ದ ಜಿಮ್ ಟ್ರೇನರ್ ಆಗಿದ್ದ ಎನ್ನಲಾಗಿದೆ.

ಸಂತ್ರಸ್ತೆ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಿಮ್‌ಗೆ ಬರುವ ಯುವತಿ ಮತ್ತು ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಾ ಟ್ರೆನ್ ಮಾಡುತ್ತಿದ್ದ ಎಂದು ಆರೋಪಿಸಿದ್ದರು.

ಭಜರಂಗ ದಳದ ಕಾರ್ಯಕರ್ತರು ಸೇರಿಕೊಂಡು ಜಿಮ್‌ಗೆ ಬೀಗ ಹಾಕಿದ್ದರು. ಆರೋಪಿ ಸಾಬೀರ್‌ನನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ