ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕರಾಗಿ ರಾಜಶೇಖರ ಕಮತಿ ಅವರನ್ನು ನೇಮಕ ಮಾಡಲಾಗಿದೆ.
ವಾರ್ಡ್ ಸಂಖ್ಯೆ 4ರ ಸದಸ್ಯ ರಾಜಶೇಖರ ಕಮತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕರ ಆಯ್ಕೆಯಲ್ಲಿ ಈ ಬಾರಿ ಧಾರವಾಡ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ. ವಿನಯ ಕುಲಕರ್ಣಿಯವರ ಆಪ್ತರಾಗಿದ್ದಾರೆ. ಈ ಹಿಂದೆ ವಿಪಕ್ಷ ನಾಯಕಿಯಾಗಿದ್ದ ಸುವರ್ಣ ಕಲ್ಲಕುಂಟ್ಲ ಅವಧಿ ಮುಗಿದ ಹಿನ್ನೆಲೆಯಲ್ಲಿ ನೂತನ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿದ್ದು, ಮಹಾನಗರ ಪಾಲಿಕೆಯಲ್ಲಿ ಜನರ ಧ್ವನಿಯಾಗಿ, ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ರಾಜಶೇಖರ ಕಮತಿ ತಿಳಿಸಿದ್ದಾರೆ.

