ಹುಬ್ಬಳ್ಳಿ: ಅಂತರ ರಾಜ್ಯ ಕುಖ್ಯಾತ ದರೋಡೆಕೋರ ಫರಾನ್ ಶೇಖ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ.
ಬಂಧನದ ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದ ರೌಡಿ ಫರಾನ್ ಮೇಲೆ ಸಬ್ ಇನ್ಸ್ಪೆಕ್ಟರ್ ಕವಿತಾ ಮಾಡಗ್ಯಾಳ ಪೈರಿಂಗ್ ಮಾಡಿ ಬಂಧಿಸಿದ್ದಾರೆ. ಗಾಯಳು ಫರಾನ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಿನ್ನದ ಅಂಗಡಿ ದರೋಡೆ ಪ್ರಕರಣದಲ್ಲಿ ಬಂಧಿಸಲು ತೆರಳಿದ್ದ ಹುಬ್ಬಳ್ಳಿ ಪೊಲೀಸರು, ಕರ್ನಾಟಕ ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಿಗೆ ಬೇಕಾಗಿದ್ದ ಫರಾನ್ ಶೇಖ್ನನ್ನು ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಫರಾನ್ ಶೇಖ್ ವಿರುದ್ಧ ಒಟ್ಟು 15 ಪ್ರಕರಣಗಳಿವೆ. ಹೈದರಾಬಾದ್ ಮೂಲದ ಫರಾನ್ ಶೇಖ್ ಕೊಲೆ, ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

