ಧಾರವಾಡ: ಕಟ್ಟಡ ಕಾರ್ಮಿಕರ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧಾರವಾಡದಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ರಾಜ್ಯಮಟ್ಟದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ಬಾಕಿ ಶೈಕ್ಷಣಿಕ ಸಹಾಯ ಧನ, ಪಿಂಚಣಿ ಸೌಲಭ್ಯ, ಆರೋಗ್ಯ ಸೇವೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುವಂತೆ ಧಾರವಾಡದಲ್ಲಿ ರಾಜ್ಯಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಸಮ್ಮೇಳನದ ಆರಂಭಕ್ಕೂ ಮುನ್ನ ಸಾವಿರಾರು ಕಟ್ಟಡ ಕಾರ್ಮಿಕರು ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ, ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಮತ್ತು ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದರು.

