ಹುಬ್ಬಳ್ಳಿ: ಹಣಕ್ಕಾಗಿ ಜೀವ ಬೆದರಿಕೆ ಹಾಕಿರುವ ಸಂಬಂಧ ನಟೋರಿಸ್ ರೌಡಿ ಬಚ್ಚಾಖಾನ್ ಜೊತೆ ಆತನ 7 ಸಹಚರರನ್ನು ಹುಬಳ್ಳಿ-ಧಾರವಾಡದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಮೀನು ವ್ಯವಹಾರಕ್ಕೆ ಸಂಬಂಧಿಸಿ ಖರೀದಿದಾರರು ಹಾಗೂ ಮಾರಾಟಗಾರರ ನಡುವೆ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಬಚ್ಚಾಖಾನ್ ಸಹಚರರ ತಂಡವು ಜಮೀನು ಮಾರಾಟಗಾರರಿಗೆ ಕೋಟ್ಯಂತರ ರೂ. ಕೊಡುವಂತೆ ನಿರಂತರವಾಗಿ ಕರೆಗಳನ್ನು ಮಾಡಿ ಜೀವ ಬೆದರಿಕೆ ಹಾಕುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕರು ಸಿಸಿಬಿ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು.

ದೂರು ಸ್ವೀಕರಿಸಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಬಚ್ಚಾಖಾನ್‌ನ ಸಹಚರರಾದ ಹು-ಧಾ.ದ 7 ಜನರನ್ನು ಬಂಧಿಸಲಾಯಿತು. ಬೆಂಗಳೂರಿನಲ್ಲಿ ಪ್ರಮುಖ ಆರೋಪಿ ಬಚ್ಚಾಖಾನ್‌ನನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಆಯುಕ್ತ ಎನ್. ಶಶಿಕುಮಾರ್‌ ಮಾಧ್ಯಮಕ್ಕೆ ತಿಳಿಸಿದ್ದಾರೆ.