Showing 20 of 133 posts • Page 3 of 7
ಓಮಿನಿ ಕಾರು ಹಾಗೂ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇನ್ನೂ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ನಡೆದಿದೆ.
ಅಪ್ರಾಪ್ತೆಯನ್ನು ಪ್ರೀತಿ ಮಾಡು ಅಂತಾ ಬಲವಂತ ಮಾಡಿದ್ದಲ್ಲದೇ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅವರ ಪೋಷಕರ ಮುಂದೆಯೇ ನಿನ್ನ ಮಗಳನ್ನು ಮದುವೆ ಮಾಡಿ ಕೊಡದೇ ಹೋದ್ರೆ ಅವಳನ್ನು ಕೂಡಾ ನೇಹಾ ಹಿರೇಮಠ ರೀತಿಯಲ್ಲಿಯೇ ಕೊಲೆ ಮಾಡುತ್ತೇನೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಶೂನ್ಯವಾಗಿ ಅಭಿವೃದ್ಧಿದ್ದರು ಸಹ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದ್ದಿಲ್ಲದೆ ಆಸ್ತಿ ತೆರಿಗೆಯನ್ನು ಹೆಚ್ಚು ಮಾಡಿ ಆದೇಶ ಹೊರಡಿಸಿ, ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದ್ದಾರೆ.
ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 26 ಸೋಮವಾರ ಮೊಸರಿನ ಗಡಿಗೆಯನ್ನು ಒಡೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಕ್ಷಾ ಬಂಧನ ಹಬ್ಬವನ್ನ ಭಾರತದಲ್ಲಿ ಬಹಳ ಜೋರಾಗಿಯೇ ಆಚರಿಸಲಾಗುತ್ತದೆ. ಸಹೋದರ ಹಾಗೂ ಸಹೋದರಿಯರ ನಡುವಿನ ಬಾಂಧವ್ಯವನ್ನ ಗಟ್ಟಿ ಮಾಡುವ ಹಬ್ಬ ಇದು ಎನ್ನಬಹುದು
ಕೋಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿ, ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ ಕರೆಯ ಮೇರೆಗೆ, ಹುಬ್ಬಳ್ಳಿಯಲ್ಲೂ ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಸ್ಥಗಿತಗೊಳಿಸಿ ವಿನೂತನವಾಗಿ ಪ್ರತಿಭಟನೆ ಮಾಡಿದರು.
ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ಕಾನೂನು ಸಲಹೆ ಪಡೆದು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ.
ಹಳೇ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಿ ಭಾರತ ನಕ್ಷೆ ತಯಾರಿಸಿ ಯುವಕರು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿರುವ ಅಪರೂಪದ ಘಟನೆ ನಡೆದಿದೆ.
ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ ಪತ್ತೆಯಾದ ಘಟನೆ ಇಲ್ಲಿಯ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ.
ಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಎಲ್ಲೆಡೆ ಆಚರಿಸಲಾಗುತ್ತದೆ. ಅದೇ ರೀತಿ ತಾಲೂಕು ಆಡಳಿತದಿಂದ ಆಚರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಆಗಸ್ಟ್ 14 ರಂದು ಸಂಜೆ 4 ಗಂಟೆಗೆ
ರಾಜ್ಯ ಸರ್ಕಾರದ ಧಾರವಾಡ ರಂಗಾಯಣಕ್ಕೆ ನಿರ್ದೇಶಕರನ್ನಾಗಿ “ಕಲಿಯುಗದ ಕುಡುಕ ” ಖ್ಯಾತಿಯ ರಾಜು ತಾಳಿಕೋಟೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೃತ ಪಿಎಸ್ಐ ಪರಶುರಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೂಡಲೇ ಆರೋಪಿಗಳನ್ನು ಬಂಧಿಸಿ ಪರಶುರಾಮ ಕುಟುಂಬಕ್ಕೆ ಸರ್ಕಾರ ನ್ಯಾಯ ಕೊಡಿಸುವ ಮೂಲಕ, ಅವರಿಗೆ ರಕ್ಷಣೆ ನೀಡಬೇಕೆಂದು ಮಾಜಿ ಸಿಎಂ
ಬುಲೆರೊ ವಾಹನವೊಂದು ಬೈಕ್ ಸವಾರನಿಗೆ ಗುದ್ದಿ ಪರಾರಿಯಾಗಿರುವ ಘಟನೆ ಧಾರವಾಡದ ಹಳೇ ಡಿವೈಎಸ್ಪಿ ವೃತ್ತದ ಬಳಿ ನಡೆದಿದ್ದು, ಈ ಭಯಾನಕ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹುಬ್ಬಳ್ಳಿಯಲ್ಲಿ ಗಾಂಜಾ ಪೂರೈಸುತ್ತಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತು ಎಲ್ಲಿಂದ ಬರುತ್ತೆ ಅನ್ನೋದರ ಬಗ್ಗೆ ತನಿಖೆಯಾಗುತ್ತಿದೆ ಎಂದು ಹೇಳಿದರು.
ಬೈಕ್ಗೆ ಹಿಂದಿನಿಂದ ಬಂದ ಬೊಲೆರೊ ವಾಹನವೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ನಿಂದ ಹಾರಿ ಪಕ್ಕದ ರಸ್ತೆ ಬಿದ್ದ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡದ ವಿಶ್ವಕರ್ಮ ಸರ್ಕಲ್ನಲ್ಲಿ ನಡೆದಿದೆ.
ಅಲೆಮಾರಿ ಜನಾಂಗಕ್ಕೆ ಉಳುಮೆ ಮಾಡಲು ಜಮೀನು ನೀಡುವಂತೆ ಆಗ್ರಹಿಸಿ ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸ್ವಾತಂತ್ರ್ಯ ಹೋರಾಟದಲ್ಲಿ ಉತ್ತರ ಕರ್ನಾಟಕ ಹಾಗೂ ಪ್ರಮುಖವಾಗಿ ಧಾರವಾಡದ ಪಾತ್ರ ಏನು ಎಂಬುದರ ಕುರಿತ ಛಾಯಾಚಿತ್ರ ಪ್ರದರ್ಶನವೊಂದನ್ನು ಧಾರವಾಡದ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಮಿಷನರ್ ಶಶಿಕುಮಾರ್ ಹಾಗೂ ಸಂಚಾರಿ ವಿಭಾಗದ ಡಿಸಿಪಿ ರವೀಶ್ ಸೂಚನೆ ಮೇರೆಗೆ ಫೀಲ್ಡ್ಗೆ ಇಳಿದ ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಮರಳು ಸಿದ್ದಪ್ಪ 9 ಪ್ರಕರಣ ದಾಖಲಾಗಿದೆ.
ಕರುವಿಗೆ ಜನ್ಮ ನೀಡಿ ರೋಗಕ್ಕೆ ತುತ್ತಾಗಿದ್ದ ತಾಯಿ ಆಕಳೊಂದು ಕಲ್ಯಾಣಪುರ ಬಸವಣ್ಣಜ್ಜನವರ ಆರ್ಶಿವಾದದಿಂದ ಆರೋಗ್ಯ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ರೈತ ಆಕಳು ಕರುವನ್ನೆ ಮಠಕ್ಕೆ ನೀಡಿದ ಘಟನೆ ಕುಂದಗೋಳ ಪಟ್ಟಣದಲ್ಲಿ ನಡೆದಿದೆ.
ಫಾಸ್ಟ್ಟ್ರ್ಯಾಕ್ ಕುರಿತು ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆಗೆ ನೇಹಾ ತಂದೆ ಕಾರ್ಪೊರೇಟ್ ನಿರಂಜನ ಹಿರೇಮಠ ಪ್ರತಿಕ್ರಿಯೆ ನೀಡಿದ್ದಾರೆ.