Showing 20 of 129 posts • Page 4 of 7
ಅಂತರ ರಾಜ್ಯ ಕುಖ್ಯಾತ ದರೋಡೆಕೋರ ಫರಾನ್ ಶೇಖ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕರಾಗಿ ರಾಜಶೇಖರ ಕಮತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ್ ಹಳ್ಳೂರ ತಿಳಿಸಿದ್ದಾರೆ.
ಇಂದು ನವಲಗುಂದ ಶಹರದಲ್ಲಿ ರೈತ ಹುತಾತ್ಮ ದಿನಾಚಾರಣೆಯನ್ನು ಆಚರಿಸುವ ಪ್ರಯುಕ್ತ ಭಾರಿ ವಾಹನಗಳ ಸುಗಮ ಸಂಚಾರ ಹಿತದೃಷ್ಟಿಯಿಂದ ಮಾರ್ಗ ಬದಲಾವಣೆ ಮಾಡಲಾಗಿದೆ.
ಪೌರಕಾರ್ಮಿಕರ ಸಂಘದ ವಿವಿಧ ಹಕ್ಕೊತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ 3 ನೇ ದಿನದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆಮರಣ ಉಪವಾಸ ಹೋರಾಟ ಅರೆಬೆತ್ತಲೆಯಾಗಿ ಹೋರಾಟ ಮಾಡಿದರು.
ರಸ್ತೆ ದುರಸ್ತಿ ಪಡಿಸಿ ಚಾಕಲಬ್ಬಿ ಗ್ರಾಮಕ್ಕೆ ಸಾರಿಗೆ ಬಸ್ ಸೇವೆ ಆರಂಭಿಸಲು ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಇತ್ತಿಚಿಗೆ ಲೋಕೋಪಯೋಗಿ ಇಲಾಖೆ ಮುಂದೆ ಪ್ರತಿಭಟನೆ,
ಜುಲೈ 21ರಂದು ನಡೆಯುವ ರೈತ ಹುತಾತ್ಮ ದಿನಾಚರಣೆಯ ನಿಮಿತ್ತ ನಗರದಲ್ಲಿರುವ ರೈತ ಭವನಕ್ಕೆ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಶಾಸಕ ಎನ್.ಎಚ್.ಕೋನರಡ್ಡಿ ಭೇಟಿ ನೀಡಿದರು.
ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 5 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿರುವ ಗೋಪಾಲ ಲಮಾಣಿ ಎಂಬವರ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 824 ಪ್ರಕರಣಗಳನ್ನು ಇತ್ಯರ್ಥವಾಗಿವೆ ಎಂದು ದಿವಾಣಿ ನ್ಯಾಯಾಧೀಶರಾದ ನವೀನ ಡಿಸೋಜಾ ಹೇಳಿದರು.
ಬಿಎಸ್ಎಫ್ ಯೋಧರೊಬ್ಬರು ಅನಾರೋಗ್ಯದಿಂದ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಮಂಜುನಾಥ ಕುಂದರಗಿ (33) ಎಂಬುವವರೇ ಸಾವಿಗೀಡಾದವರು.
ತ್ಯಾಗ ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಅಣ್ಣಿಗೇರಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಿಂದೂ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಹಬ್ಬ ಆಚರಣೆ ಮಾಡಿರುವ ದೃಶ್ಯಗಳು ಅಣ್ಣಿಗೇರಿನಲ್ಲಿ ಕಂಡು ಬಂದವು.
ಯರಗುಪ್ಪಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಆಶ್ರಯದಲ್ಲಿ ಐತಿಹಾಸಿಕ ಮೊಹರಂ ಹಬ್ಬದ ನಿಮಿತ್ತ ಜುಲೈ 18ರಂದು ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಹೆಜ್ಜೆ ಮೇಳ ಸ್ಪರ್ಧೆ ಏರ್ಪಡಿಸಲಾಗಿದೆ.
ಸರ್ಕಾರಿ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತು ಬಲಿಯಾಗಿದ್ದು, ಓರ್ವ ರೈತನಿಗೆ ಗಂಭೀರ ಗಾಯವಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ನಡೆದಿದೆ.
ಹುಬ್ಬಳ್ಳಿ ಮೂಲದ ಸರ್ವಮಂಗಳ ವಕ್ಕುಂದ ಎಂಬ ವೃದ್ಧೆ ಬ್ಯಾಗ್ನ್ನು ಇತ್ತೀಚೆಗೆ ಕಳೆದುಕೊಂಡಿದ್ದರು. ಆ ಬಗ್ಗೆ ಅವರು ಧಾರವಾಡ ಶಹರ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು.
ಕಲಘಟಗಿ ಪೊಲೀಸರು ಮದ್ಯ ಕುಡಿದು ನೇಣಿಗೆ ಶರಣಾಗಲು ಮುಂದಾಗಿದ್ದ ವ್ಯಕ್ತಿಯನ್ನು ಸಮಯಕ್ಕೆ ಸರಿಯಾಗಿ ಬಂದು ರಕ್ಷಣೆ ಮಾಡಿದ ಘಟನೆ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿಂದು ನಡೆದಿದೆ.
ಕನ್ನಡದ ಹೆಮ್ಮೆಯ ಪುತ್ರಿ ಅಪರ್ಣಾ ಅವರಿಗೆ ಭಾವಪೂರ್ವ ಶ್ರದ್ದಾಂಜಲಿಯನ್ನು ನಗರದ ಚೆನ್ನಮ್ಮನ ವೃತ್ತದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ನೇತೃತ್ವದಲ್ಲಿ ಸಲ್ಲಿಸಲಾಯಿತು.
ದಿನೇ ದಿನೇ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಕ್ಯೆ ಹೆಚ್ಚಾಗುತ್ತಲೆ ಇದೆ. ಇದೀಗ ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಉಡುಪಿ ಮೂಲದ ನಗರದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಡೆಂಗ್ಯೂ ವಾರ್ಡ್ ನಲ್ಲಿ ದಾಖಲಾಗಿದ್ದ ರೋಗಿಗಳ ಆರೋಗ್ಯ, ಸೂಕ್ತ ಚಿಕಿತ್ಸೆ ಕುರಿತು ವಿಚಾರಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕಾ ಘಟಕ ಕುಂದಗೋಳ ನಿವೃತ್ತ ನೌಕರರ ಸಂಘದಿಂದ ಶಾಸಕ ಎಂ.ಆರ್ ಪಾಟೀಲ್ ಮತ್ತು ತಾಲೂಕ ದಂಡಾಧಿಕಾರಿ ಅಶೋಕ ಶಿಗ್ಗಾಂವಿ ಇವರಿಗೆ ತಮ್ಮ ಮನವಿ ಪತ್ರವನ್ನು ನೀಡಿದರು.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನ ಸಂಪರ್ಕ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗ್ಯಾಮ್ಲಿಂಗ್ ಮಾಡಿದವರು ಉದ್ದಾರ ಆಗಿದವರು ಇತಿಹಾಸದಲ್ಲಿ ಇಲ್ಲಾ. ಮಹಾಭಾರತದಲ್ಲಿ ಪಾಂಡುವರು ಇಡೀ ರಾಜ್ಯ ವನ್ನು ಕಳೆದುಕೊಂಡಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಕಮೀಷನರ್ ಶಶಿಕುಮಾರ್ ಹೇಳಿದರು.