Showing 20 of 133 posts • Page 5 of 7
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಡೆಂಗ್ಯೂ ವಾರ್ಡ್ ನಲ್ಲಿ ದಾಖಲಾಗಿದ್ದ ರೋಗಿಗಳ ಆರೋಗ್ಯ, ಸೂಕ್ತ ಚಿಕಿತ್ಸೆ ಕುರಿತು ವಿಚಾರಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕಾ ಘಟಕ ಕುಂದಗೋಳ ನಿವೃತ್ತ ನೌಕರರ ಸಂಘದಿಂದ ಶಾಸಕ ಎಂ.ಆರ್ ಪಾಟೀಲ್ ಮತ್ತು ತಾಲೂಕ ದಂಡಾಧಿಕಾರಿ ಅಶೋಕ ಶಿಗ್ಗಾಂವಿ ಇವರಿಗೆ ತಮ್ಮ ಮನವಿ ಪತ್ರವನ್ನು ನೀಡಿದರು.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನ ಸಂಪರ್ಕ ಕಚೇರಿಗೆ ಮುತ್ತಿಗೆ ಹಾಕಿ ಎಬಿವಿಪಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ ಎಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗ್ಯಾಮ್ಲಿಂಗ್ ಮಾಡಿದವರು ಉದ್ದಾರ ಆಗಿದವರು ಇತಿಹಾಸದಲ್ಲಿ ಇಲ್ಲಾ. ಮಹಾಭಾರತದಲ್ಲಿ ಪಾಂಡುವರು ಇಡೀ ರಾಜ್ಯ ವನ್ನು ಕಳೆದುಕೊಂಡಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಕಮೀಷನರ್ ಶಶಿಕುಮಾರ್ ಹೇಳಿದರು.
ಆನ್ಲೈನ್ನಲ್ಲಿ ಪಬ್ಜಿ ಸೇರಿದಂತೆ ವಿವಿಧ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ.ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ
7ನೇ ವೇತನ ಆಯೋಗದ ವರದಿ ಜಾರಿ, ಎನ್ಪಿಎಸ್ ರದ್ದು, ಹಳೇ ಪಿಂಚಣಿ ಯೋಜನೆ ಜಾರಿ ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿ ಸರ್ಕಾರಿ ಆದೇಶ ಹೊರಡಿಸಲು ಆಗ್ರಹ.
ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ನಕಲಿ ಮದ್ಯವನ್ನು ರೆಡಿ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿ 33 ಲಕ್ಷ ಮೌಲ್ಯದ ನಕಲಿ ಮದ್ಯವನ್ನು ಸೀಜ್ ಮಾಡುವಲ್ಲಿ ಧಾರವಾಡ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.
ಕಟ್ಟಡ ಕಾರ್ಮಿಕರ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧಾರವಾಡದಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರ ರಾಜ್ಯಮಟ್ಟದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ಕೋರ್ಟ್ ಗೆ 483 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
2024-25ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮಾವು ಬೆಳೆಗೆ ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಗ್ರಾಮ ಪಂಚಾಯತಿಗಳನ್ನು ಮಾವು ಬೆಳೆ ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.
ಶ್ರೀರಾಮ ಸೇನೆ ಮುಖಂಡರ ಫೇಸ್ಬುಕ್ ಬ್ಲಾಕ್ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬೇಕು, ಅಸಭ್ಯ ವರ್ತನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ನೀಟ್ ಹಾಗೂ ನೆಟ್ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಕೇಂದ್ರ ಶಿಕ್ಷಣ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಸ್ಎಫ್ಐ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ದೇಶಪಾಂಡೆ ಆಸ್ಪತ್ರೆಯಲ್ಲಿ ರೋಟ್ ವೈರಲ್ ಅತಿಸಾರ ಪೌಷ್ಟಿಕಾಂಶ ಹಾಗೂ ರಕ್ತಹೀನತೆಯಿಂದಾಗಿ ದಾಖಲಾಗಿದ್ದ ಅಭಿನಂದನ್ ಎಂಬ 13 ತಿಂಗಳು ಮಗುವಿಗೆ ಪ್ರಪಂಚದಲ್ಲಿಯೇ ಅತೀ ಅಪರೂಪದ ರಕ್ತದ ಗುಂಪಾದ O+ve ಬಾಂಬೆ ಬ್ಲಡ್ ಗ್ರೂಪ್ ರಕ್ತದ ಅವಶ್ಯಕತೆ ಇತ್ತು.
ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ನೇಮಕವಾಗಿದ್ದಾರೆ ರೇಣುಕಾ ಸುಕುಮಾರ ವರ್ಗಾವಣೆ ವಾಗಿದ್ದಾರೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ತಾಲೂಕಿನ ಸಂಶಿ ಗ್ರಾಮದ ರೈತನೋರ್ನ ಸಾಲದ ಬಾಧೆಯಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಶಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಟಾಟಾ ಹಿಟಾಚಿ ಕಂಪೆನಿಯಲ್ಲಿ ಕಳ್ಳತನವಾಗಿದ್ದ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಬ್ಯಾಟರಿ, ಟೈರ್ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವವು ಗುರುವಾರ ಜರುಗಲಿದ್ದು, ಈ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಕೃವಿವಿ ನಿರ್ಧರಿಸಿದೆ.
‘ಸೋಮವಾರ ‘ವಕ್ಫ್ ಅದಾಲತ್’ನಲ್ಲಿ ಒಟ್ಟು 197 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು, ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.