ಬೆಂಗಳೂರು: ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ.ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದೆ.
ಆ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗಲಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
15% ಶುಲ್ಕ ಹೆಚ್ಚಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಒತ್ತಾಯಿಸಿತ್ತು. ಆದರೆ 2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಕಾಲೇಜು ವೃತ್ತಿಪರ ಕೋರ್ಸ್ಗಳ ಶುಲ್ಕ ಶೇಕಡಾ 10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.

