Bengaluru 23°C
Ad

ಪ್ರವೇಶಾತಿ ಶುಲ್ಕ ಶೇ 10ರಷ್ಟು ಹೆಚ್ಚಳ: ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ಸರ್ಕಾರ

Fees

ಬೆಂಗಳೂರು: ಖಾಸಗಿ ಇಂಜನಿಯರಿಂಗ್ ಪ್ರವೇಶಾತಿ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ.ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಶುಲ್ಕ ಹೆಚ್ಚಳ ಮಾಡಲಾಗಿದೆ.

Ad
300x250 2

ಆ ಮೂಲಕ ಹೆಚ್ಚುವರಿ ಶುಲ್ಕದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗಲಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣಪ್ರಕಾಶ್​ ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಇಂದು ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

15% ಶುಲ್ಕ ಹೆಚ್ಚಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಒತ್ತಾಯಿಸಿತ್ತು. ಆದರೆ 2024-25ನೇ ಸಾಲಿನ ಇಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕಾಲೇಜು ವೃತ್ತಿಪರ ಕೋರ್ಸ್​ಗಳ ಶುಲ್ಕ ಶೇಕಡಾ 10ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ.

Ad
Ad
Nk Channel Final 21 09 2023
Ad