ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನಪ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿನ್ ಫೆಸ್ಟ್ 2025 ಆ.25ರಂದು ನಡೆಯಲಿದೆ.

ಬೆಳಗ್ಗೆ 9ಕ್ಕೆ ಎಲ್‌ಸಿಆರ್‌ಐ ಬ್ಲಾಕ್‌ನ ಎಲ್‌ಎಫ್ ರಸ್ತಿನಾ ಸಭಾಂಗಣದಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಉತ್ಸವ ಉದ್ಘಾಟಿಸುವರು.

ಹಿರಿಯ ವಿದ್ಯಾರ್ಥಿ, ಚಿತ್ರನಟ ರಾಜ್ ದೀಪಕ್ ಶೆಟ್ಟಿ ಅತಿಥಿಯಾಗಿ ಭಾಗವಹಿಸುವರು. ಸಮಾರೋಪ ಸಮಾರಂಭ ಮಧ್ಯಾಹ್ನ 3.30ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿಝ್ಡೋಮ್ ಎಜ್ಯುಕೇಶನ್ ಇದರ ಸ್ಥಾಪಕಿ ಹಾಗೂ ವ್ಯವಸ್ಥಾಪಕ ನಿರ್ದೇಶಕಿ ಡಾ. ಫ್ರಾನ್ಸಿಸ್ಕಾ ತೇಜ್ ಪಾಲ್ಗೊಳ್ಳುವರು.

ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ವರಿಷ್ಠಾಧಿಕಾರಿ ವಂ. ಮೆಲ್ವಿನ್ ಜೋಸೆಫ್‌ ಪಿಂಟೊ ಅಧ್ಯಕ್ಷತೆ ವಹಿಸುವರು ಎಂದು ವಿವಿ ಕುಲಪತಿ ವಂ. ಡಾ. ಪ್ರವೀಣ್ ಮಾರ್ಟಿಸ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.