ಮಂಗಳೂರು: ಮಂಗಳೂರಿನ ಯೆನೆಪೋಯ (ಪರಿಗಣಿತ ವಿಶ್ವವಿದ್ಯಾಲಯ) ಸಂಸ್ಥೆಗೆ ಒಳಪಟ್ಟ ‘ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್’ ನ 7ನೇ ಪದವಿ ಪ್ರದಾನ ಸಮಾರಂಭವು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿರುವ ‘ಯೆಂಡ್ಯೂರೆನ್ಸ್ ಝೋನ್ ಸಭಾಂಗಣʼದಲ್ಲಿ ಅದ್ದೂರಿಯಾಗಿ ಆಯೋಜನೆಗೊಂಡಿದೆ.
ಮೂರು ದಿನಗಳ ಕಾಲ ಜರುಗಲಿರುವ ಈ ಶೈಕ್ಷಣಿಕ ಮಹೋತ್ಸವದಲ್ಲಿ ಒಟ್ಟು 2164 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಅಕ್ಟೋಬರ್ 28 ರಂದು ನಡೆಯುವ ಮೊದಲ ದಿನದ ಸಮಾರಂಭದಲ್ಲಿ ಬಿಸಿಎ ವಿಭಾಗದ 779 ವಿದ್ಯಾರ್ಥಿಗಳಿಗೆ ಪದವಿ ನೀಡಲಾಗುವುದು.
ಈ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ‘ಕಾಕುಂಜೆ ಸಾಫ್ಟ್ವೇರ್ ಪ್ರೈವೇಟ್ ಲಿಮಿಟೆಡ್’ ಸಂಸ್ಥಾಪಕ ಗೋಪಾಲಕೃಷ್ಣ ಭಟ್ ಕಾಕುಂಜೆ ಹಾಗೂ ಯೆನೆಪೋಯ ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಕ ಡಾ. ಬಿ. ಟಿ. ನಂದೀಶ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಯೆನೆಪೋಯ ಪದವಿ ಕಾಲೇಜು ಪ್ರಾಂಶುಪಾಲ ಪ್ರೊ. ಜೀವನ್ ರಾಜ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ.
ಅಕ್ಟೋಬರ್ 29 ರಂದು ನಡೆಯುವ ಎರಡನೇ ದಿನದ ಸಮಾರಂಭದಲ್ಲಿ ಬಿಕಾಂ ಹಾಗೂ ಬಿಬಿಎ ವಿಭಾಗಗಳ 724 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ. ಈ ದಿನ ಮಣಿಪಾಲದ ಟಿ. ಎ. ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ನಿರ್ದೇಶಕ ಡಾ. ದೇಬಾಸಿಸ್ ಪ್ರಧಾನ್ ಮುಖ್ಯ ಅತಿಥಿಗಳಾಗಿ ಮತ್ತು ಮಂಗಳೂರಿನ ಬ್ಯಾಂಕರ್ಸ್ ಇನ್ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್ಮೆಂಟ್ ಜಂಟಿ ನಿರ್ದೇಶಕ ವಿ. ರಾಜಾರಾಮನ್ ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದು, ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ. ಎಸ್. ಗಂಗಾಧರ ಸೋಮಯಾಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ನವೆಂಬರ್ 2 ರಂದು ಮೂರನೇ ದಿನದ ಸಮಾರಂಭ ಜರುಗಲಿದ್ದು, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಬಿ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಬಿ.ಎ, ಎಂ.ಲಿಬ್,ಎಂ.ಎಸ್.ಡಬ್ಲ್ಯು, ಮತ್ತು ಆನ್ಲೈನ್ ಪ್ರೋಗ್ರಾಮ್ ( ವಾಣಿಜ್ಯ ಮತ್ತು ನಿರ್ವಹಣೆ) ಸೇರಿದಂತೆ ಒಟ್ಟು 724 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಎ. ಎಮ್. ಖಾನ್ ಮುಖ್ಯ ಅತಿಥಿಗಳಾಗಿ ಹಾಗೂ ಎ.ಕೆ ಬನ್ಸಾಲ್ ಗ್ರೂಪ್ ಅಧ್ಯಕ್ಷ ದೀಪಕ್ ಮಿಶ್ರಾ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದು, ಯೆನೆಪೋಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅಶ್ವಿನಿ ದತ್ ಆರ್. ಅಧ್ಯಕ್ಷೀಯ ಭಾಷಣ ಮಾಡಲಿದ್ದಾರೆ.
ಸಮಾರಂಭವು ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯೊಂದಿಗೆ ಆರಂಭಗೊಳ್ಳಲಿದ್ದು,ಅತಿಥಿಗಳ ಭವ್ಯ ಮೆರವಣಿಗೆಯೊಂದಿಗೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಕಾರ್ಯಕ್ರಮದಲ್ಲಿ ಯೆನೆಪೋಯ ಪದವಿ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ವಾಣಿಜ್ಯ ಮತ್ತು ನಿರ್ವಹಣ ವಿಭಾಗದ ಡೀನ್ ಪ್ರೊ.ಶರೀನ ಹಾಗು ಉಪಪ್ರಾಂಶುಪಾಲ ಶ್ರೀ ನಾರಾಯಣ ಸುಕುಮಾರ ಉಪಸ್ಥಿತರಿರುವರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಬೋಧಕವೃಂದ ಹಾಗೂ ವಿದ್ಯಾರ್ಥಿಗಳ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.

