ನವದೆಹಲಿ: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ ಖಾಲಿ ಇರುವ ಲೋಕೋ ಪೈಲಟ್ ಮತ್ತು ಟ್ರೈನ್ಸ್ ಮ್ಯಾನೇಜರ್ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ ಜೂನ್ 12 ಕೊನೆಯ ದಿನಾಂಕವಾಗಿದೆ.
ಅಸಿಸ್ಟಂಟ್ ಲೋಕೋ ಪೈಲಟ್ – 827 ಮತ್ತು ಟ್ರೈನ್ಸ್ ಮ್ಯಾನೇಜರ್ – 375 ಹುದ್ದೆಗಳಿವೆ. ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಜತೆಗೆ ಐಟಿಐ ಪಾಸ್ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ನಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.
ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

