Bengaluru 23°C
Ad

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು,

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿ ನವೆಂಬರ್ 05 ರಿಂದ ಪ್ರಾರಂಭವಾಗಲಿದ್ದು, 18 ರಿಂದ 45 ವರ್ಷ ವಯೋಮಾನದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಇನ್ನು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380162042, 9740982585, 9113880324 ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ತಿಳಿಸಿದ್ದಾರೆ.

Ad
Ad
Nk Channel Final 21 09 2023