Ad

ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನ

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು https://dec.karnataka.gov.in ಮೂಲಕ ಆನ್-ಲೈನ್ ಅರ್ಜಿ ಹಾಕಿಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್​ 7 ಕೊನೆಯ ದಿನವಾಗಿರಲಿದೆ. ಖಾಯಂ ಉಪನ್ಯಾಸಕರಿಗೆ ಹಂಚಿಕೆಯಾಗಿ ಉಳಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್​ಲೈನ್​ ಕೌನ್ಸಿಲಿಂಗ್​ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಎರಡು ವರ್ಷದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಪಿಹೆಚ್​ಡಿ ವಿದ್ಯಾರ್ಹತೆ ಅಥವಾ ಎನ್​ಇಟಿ, ಕೆ-ಸೆಟ್​​, ಎಸ್​ಎಸ್​ಎಲ್​ಇಟಿ ವಿದ್ಯಾರ್ಹತೆ, ಎಂಫಿಲ್​ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಅವಕಾಶ ಇರಲಿದೆ. ಅನುಭವ: ಅಭ್ಯರ್ಥಿಗಳು ಈ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್​ ಲಿಸ್ಟ್​ ಮತ್ತು ಕೌನ್ಸಿಲಿಂಗ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವೇತನ: 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ, ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ 39 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್​​ 31ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 7 ಆಗಿದೆ. ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗಳಿಗೆ ಅಭ್ಯರ್ಥಿಗಳು http://dce.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

Ad
Ad
Nk Channel Final 21 09 2023