ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಒಟ್ಟು 2,500 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳು ಖಾಲಿಯಿದ್ದು, ಕರ್ನಾಟಕ ವಲಯದಲ್ಲಿ 450 ಹುದ್ದೆಗಳು ಖಾಲಿಯಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಹಿಂದೆ ಅರ್ಜಿ ಸಲ್ಲಿಕೆಗೆ ಇದ್ದ ಕಾಲಾವಕಾಶ ವಿಸ್ತರಣೆಗೊಂಡು ಆಗಸ್ಟ್‌ 3 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಬ್ಯಾಚುಲರ್ ಪದವಿಯನ್ನು ಪಡೆದಿರಬೇಕು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ರಾಜ್ಯದ ಸ್ಥಳೀಯ ಭಾಷೆಯನ್ನು ಬಲ್ಲವರಾಗಿರಬೇಕು.

ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಭಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು. ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೂ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 48,480 ರೂ. ಗಳಿಂದ 85,920 ರೂ. ಗಳವರೆಗೆ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು ರೂ 850 ಹಾಗೂ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಹಿಳಾ ಅಭ್ಯರ್ಥಿಗಳು 175 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ವಿಧಾನ
ಕ್ಲರ್ಕ್‌ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಭಾಷಾ ಪ್ರಾವಿಣ್ಯತೆ ಆಧಾರದ ಮೇಲೆ ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳ ಕುರಿತು ಹೆಚ್ಚಿನ ವಿವರಗಳಿಗೆ ಬ್ಯಾಂಕ್‌ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ bankofbaroda.inಗೆ ಭೇಟಿ ನೀಡಿ. ಈ ಹುದ್ದೆಗೆ ಕರ್ನಾಟಕ ವಲಯದಲ್ಲಿ 450 ಹುದ್ದೆಗಳು ಖಾಲಿಯಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಹಿಂದೆ ಅರ್ಜಿ ಸಲ್ಲಿಕೆಗೆ ಇದ್ದ ಕಾಲಾವಕಾಶ ವಿಸ್ತರಣೆಗೊಂಡು ಆಗಸ್ಟ್‌ 3 2025 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.