ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಅಕ್ಟೋಬರ್ 2024ರ ಅಧಿಕೃತ ಅಧಿಸೂಚನೆಯಂತೆ ಕನ್ನಡ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಖ್ಯೆ: 03, ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ, ಪೋಸ್ಟ್ ಹೆಸರು: ಕನ್ನಡ ಉಪನ್ಯಾಸಕರು, ವೇತನ: ಪ್ರತಿ ತಿಂಗಳು 43100-83900 ರೂಪಾಯಿ. ಬಿಬಿಎಂಪಿ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಯು 07-ನವೆಂಬರ್-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು. ಅರ್ಜಿ ಶುಲ್ಕವಿಲ್ಲ, ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಡಿ ಕಾರ್ಡ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಫೋಟೋಗ್ರಾಫ್ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡು ಅರ್ಜಿ ಸಲ್ಲಿಸಬೇಕು. ಪ್ರಮುಖ ದಿನಾಂಕಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-10-2024 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 07-10-2024 ಕೊನೆಯ ದಿನಾಂಕವಾಗಿದೆ.

