ಬೆಂಗಳೂರು: ಬೆಂಗಳೂರು ಆಕಾಶವಾಣಿಯಲ್ಲಿ ಸಾಂದರ್ಭಿಕ ಸುದ್ದಿ ವಾಚಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸುದ್ದಿ ವಿಭಾಗದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಒಪ್ಪಂದ ಮೇರೆಗೆ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 23 ಆಗಿದೆ.

ವಿದ್ಯಾರ್ಹತೆ: ಸುದ್ದಿ ವಾಚಕರು ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಪ್ರಸಾರಕ್ಕೆ ಯೋಗ್ಯವಾದ ಉತ್ತಮ ಗುಣಮಟ್ಟದ ಧ್ವನಿಯನ್ನು ಹೊಂದಿರಬೇಕು. ಹಾಗೇ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೇಡಿಯೋ ಅಥವಾ ಟಿವಿ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡಿದ ಅನುಭವ ಇರಬೇಕು. ಜೊತೆಗೆ ಕಂಪ್ಯೂಟರ್​ ಅಪ್ಲಿಕೇಷನ್​ ಸಾಮಾನ್ಯ ಜ್ಞಾನ ಇರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವವರಿಗೆ ಕನಿಷ್ಠ21 ವರ್ಷ, ಗರಿಷ್ಠ 50 ವರ್ಷ ಮೀರಿರಬಾರದು. ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 354 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 266 ರೂ. ಅರ್ಜಿ ಸಲ್ಲಿಕೆ ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ತೆರಳಿ ನಿಗದಿತ ಅರ್ಜಿ ನಮೂನೆ ಪಡೆದು ಕೊನೆಯ ದಿನಾಂಕ್ಕೂ ಮುನ್ನ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ: ನಿಲಯ ನಿರ್ದೇಶಕರು, ಕಾರ್ಯಕ್ರಮ ಸಮನ್ವಯ ವಿಭಾಗ, ಆಕಾಶವಾಣಿ, ಪ್ರಸಾರ ಭಾರತಿ, ರಾಜಭವನ ರಸ್ತೆ, ಬೆಂಗಳೂರು- 560001.