ಬೆಂಗಳೂರು : ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಆನ್​​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಏಪ್ರಿಲ್ 4, 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಗೆ ಭೇಟಿ ನೀಡಬಹುದು.

ವಿದ್ಯಾರ್ಹತೆ: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು. 5 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳ ಉದ್ಯೋಗ ಕೌಶಲ್ಯವನ್ನು ಆಧಾರಿಸಿ ಹುದ್ದೆಯ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತದೆ.

ವಯೋಮಿತಿ: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ಮೀರಿರಬಾರದು. ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 35,000- 82,660 ರೂ. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಇನ್ನು ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ. ಈ ಹುದ್ದೆ ಮಾರ್ಚ್​ 12ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 4 ಆಗಿದೆ. ಆನ್​ಲೈನ್​ ಅರ್ಜಿ ಸಲ್ಲಿಕೆ ಬಳಿಕ ಅರ್ಜಿ ಪ್ರತಿಯ ಪ್ರಿಂಟ್ ತೆಗೆದು​ ಪಡೆದು ಅಗತ್ಯ ದಾಖಲೆಯೊಂದಿಗೆ ಭರ್ತಿ ಮಾಡಿದ ಅರ್ಜಿಯ ಹಾರ್ಡ್​ ಕಾಪಿ ಸಲ್ಲಿಕೆ ಮಾಡಲು ಇರುವ ಮೇ 9 ಕೊನೆ ದಿನ ಆಗಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ: ಜನರಲ್​ ಮ್ಯಾನೇಜರ್​ (ಎಚ್​ಆರ್​), ಬೆಂಗಳೂರು ಮೆಟ್ರೋ ರೈಲ್​ ಕಾರ್ಪೊರೇಷನ್​ ಲಿಮಿಟೆಡ್​, 3 ಮಹಡಿ​, ಬಿಎಂಟಿಸಿ ಕಾಂಪ್ಲೆಕ್ಸ್​, ಕೆಎಚ್​ ರಸ್ತೆ, ಶಾಂತಿನಗರ, ಬೆಂಗಳೂರು- 560027. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು bmrc.co.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.