ಪುತ್ತೂರು: ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್‌ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಹರ್ಷಿತ ಕುಮಾರಿ. ಎನ್‌ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ.

ಇವರು ಪುಣಚದ ಬಾಲಕೃಷ್ಣ ಶೆಟ್ಟಿ ಹಾಗೂ ಪವಿತ್ರಾ ದಂಪತಿಗಳ ಪುತ್ರಿ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.