ನಂಜನಗೂಡು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಂಜನಗೂಡು ನಗರದ ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಶೇ.98.08 ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿ ಎಸ್.ಎಲ್.ಅಮೂಲ್ಯ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸಿ.ಮರಿಯಾ ಗ್ರೇಸಿ ಹೇಳಿದರು.

ವಿಜ್ಞಾನ ವಿಭಾಗದಲ್ಲಿ ಶೇ.99.17, ವಾಣಿಜ್ಯ ವಿಭಾಗಕ್ಕೆ 97.08 ರಷ್ಟು ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದ ಎಸ್.ಎಲ್ ಅಮೂಲ್ಯ 600ಕ್ಕೆ 577 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಸಿ.ವರ್ಷಿತ 600 ಅಂಕಗಳಿಗೆ 573 ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಒಟ್ಟು 166 ವಿದ್ಯಾರ್ಥಿಗಳಲ್ಲಿ 164 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 42 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

114 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 2 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.