ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಫಲಿತಾಂಶ ಕುರಿತು ನಿರ್ದಿಷ್ಟವಾದ ಆಕ್ಷೇಪಣೆಗಳಿದ್ದಲ್ಲಿ ಮಾತ್ರ, ಅಂದರೆ ಆಪ್ಷನ್ ದಾಖಲಿಸಿದ್ದರೂ ಸೀಟು ಹಂಚಿಕೆಯಾಗದಿರುವ ಇತ್ಯಾದಿ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆ.30 ರ ಮಧ್ಯಾಹ್ನ 12 ಗಂಟೆ ಒಳಗೆ ಇ-ಮೇಲ್ ([email protected]) ಕಳುಹಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಸೆಟ್: ಅರ್ಜಿ ಸಲ್ಲಿಸಲು ಸೆ.2ರವರೆಗೆ ಅವಕಾಶ

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್-24) ಗೆ ಅರ್ಜಿ ಸಲ್ಲಿಸಲು ಸೆ.2 ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.3 ಕೊನೆ ದಿನ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.

— KEA (@KEA_karnataka) August 29, 2024