ಮಂಗಳೂರು: ಶಕ್ತಿನಗರದಲ್ಲಿರುವ ಸಾನಿಧ್ಯ ವಸತಿ ಶಾಲೆಯಲ್ಲಿ ‘ಸಾನಿಧ್ಯ’ (SAANIDHYA) ಸಮೂಹ ಸಂಸ್ಥೆಗಳ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿಗಳಾದ ಜಯಲಕ್ಷ್ಮಿ, ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಬೊಮ್ಮರಡ್ಡಿ, ಹಾಗೂ ಇನ್ಲ್ಯಾಂಡ್ (IN-LAND) ಗ್ರೂಪ್ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಸಿರಾಜ್ ಅಹ್ಮದ್ ಅವರು ಜಂಟಿಯಾಗಿ ಉದ್ಘಾಟಿಸಿದರು.
ಕಾರ್ಯಕ್ರಮದ ಬಳಿಕ ಅತಿಥಿಗಳು ವಿಶೇಷ ಮಕ್ಕಳೊಂದಿಗೆ ಪಟಾಕಿ ಸಿಡಿಸುವ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ವಿಶೇಷ ಮಕ್ಕಳೊಂದಿಗೆ ಸಂತಸ ಹಂಚಿಕೊಂಡ ಅತಿಥಿಗಳು, ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.

