ಇಂಡಿಯನ್​ ಓವರ್​​ಸೀಸ್​ ಬ್ಯಾಂಕ್​ನಲ್ಲಿ ಅಪ್ರೆಂಟಿಸ್​ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವಿವಿಧ ರಾಜ್ಯಗಳಲ್ಲಿ ಉದ್ಯೋಗವಕಾಶ ಇದ್ದು, ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ. ವಯೋಮಿತಿ: ಕನಿಷ್ಠ ವಯಸ್ಸು 20, ಗರಿಷ್ಠ ವಯೋಮಿತಿ 28 ವರ್ಷ. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಕ್ರಮ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ಹಿಂದುಳಿದ ಅಭ್ಯರ್ಥಿಗಳಿಗೆ 850 ರೂ, ಪ.ಜಾ. ಪ. ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈಗಾಗಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಡೆಯ ದಿನಾಂಕ ಮೇ 31. ಈ ಕುರಿತು ಹೆಚ್ಚಿನ ಮಾಹಿತಿಗೆ https://iob.in/ ಭೇಟಿ ನೀಡಿ.