Bengaluru 23°C

ವಿವೇಕಾನಂದ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಿಕಾಕೌಶಲ ಹಾಗೂ ತಂತ್ರದ ಕುರಿತಾಗಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಿಕಾಕೌಶಲ ಹಾಗೂ ತಂತ್ರದ ಕುರಿತಾಗಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ತಜ್ಞರು ಹಾಗೂ NLP ತರಬೇತುದಾರರಾದ ಪುಷ್ಪರಾಜ್ಕಾಸರಗೋಡು ಇವರು ಭಾಗವಹಿಸಿದರು. ಕಲಿಕಾ ವಿಧಾನಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಸಬೇಕಾದ ತಯಾರಿಯ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.


ಕಾರ್ಯಾಗಾರದಲ್ಲಿ ಉಪಪ್ರಾಂಶುಪಾಲರಾದ ದೇವಿಚರಣ್ರೈ ಹಾಗೂ ಇಲೆಕ್ಟ್ರಾನಿಕ್ಸ್ವಿಭಾಗದ ಮುಖ್ಯಸ್ಥರಾದ ಭೀಮ ಭಾರದ್ವಾಜ್ಇವರು ಉಪಸ್ಥಿತರಿದ್ದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ಶ್ರುತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


Nk Channel Final 21 09 2023