ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಬರೋಬ್ಬರಿ 400 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂಜಿನಿಯರ್ ಟ್ರೈನಿ, ಸೂಪರ್‌ವೈಸರ್ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಿಇ ಪದವಿ ಹಾಗೂ ಡಿಪ್ಲೋಮಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆ. 28 ಆಗಿದೆ.
ಎಂಜಿನಿಯರ್ ಟ್ರೈನಿ ವಿಭಾಗದಲ್ಲಿ ಖಾಲಿ ಇರುವ 150 ಹುದ್ದೆಗಳು ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಸೂಪರ್‌ವೈಸರ್ ಟ್ರೈನಿ ವಿಭಾಗದಲ್ಲಿ 250 ಹುದ್ದೆ ಖಾಲಿ ಇದ್ದು, ಡಿಪ್ಲೊಮ ಇನ್ ಎಂಜಿನಿಯರಿಂಗ್ ಮಾಡಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸ ಬಹುದು.
ವಯೋಮಿತಿ: ಎಂಜಿನಿಯರ್ ಟ್ರೈನಿ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 29 ವರ್ಷ ಮತ್ತು ಸೂಪರ್‌ವೈಸರ್ ಟ್ರೈನಿ ಹುದ್ದೆಗೆ 27 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಶುಲ್ಕವಾಗಿ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಾಜಿ ಸೈನಿಕ ಅಭ್ಯರ್ಥಿಗಳು 472 ರೂ. ಮತ್ತು ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು 1,072 ರೂ. ಪಾವತಿಸಬೇಕು.
ಪಾವತಿ ವಿಧಾನ: ಆನ್‌ಲೈನ್. ಮಾಸಿಕ ವೇತನ: ಎಂಜಿನಿಯರ್ ಟ್ರೈನಿ ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 50,000 ರೂ. – 1,80,000 ರೂ. ಮತ್ತು ಸೂಪರ್‌ವೈಸರ್ ಟ್ರೈನಿ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 32,000 ರೂ. – 1,20,000 ರೂ. ವೇತನ ನಿಗದಿಸಲಾಗಿದೆ.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://careers.bhel.in/index.jsp#openings)