ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6,238 ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದ್ದು, ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ತಂತ್ರಜ್ಞ ಗ್ರೇಡ್ I ಮತ್ತು ಗ್ರೇಡ್ III ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ವಿದ್ಯಾರ್ಹತೆ:
ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ತಂತ್ರಜ್ಞ ಗ್ರೇಡ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ, ಬಿಎಸ್​ಸಿ, ಬಿಇ ಅಥವಾ ಬಿಟೆಕ್​ ಪದವಿ ಪಡೆದಿರಬೇಕು.

ತಂತ್ರಜ್ಞ ಗ್ರೇಡ್ III ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 33 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:
ಟೆಕ್ನಿಕಲ್​ ಗ್ರೇಡ್​ 1 ಸಿಗ್ನಲ್​​ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 29,200 ರೂ. ವೇತನ ಇದ್ದು, ಟೆಕ್ನಿಕಲ್​ ಗ್ರೇಡ್​​ 3 ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 19,900 ರೂ. ಸಂಬಳವನ್ನು ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಸ್ಸಿ/ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 250 ರೂ. ಹಾಗೂ ಉಳಿದ ಇತರೆ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, , ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 28 ಆಗಿದೆ. ಅರ್ಜಿಶುಲ್ಕ ಪಾವತಿಗೆ ಕೊನೆಯ ಜುಲೈ 30 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು indianrailways.gov.in ಭೇಟಿ ನೀಡಿ.