ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 3,717 ಹುದ್ದೆಗಳಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಕ್ಷಣಾ ಇಲಾಖೆಯ ಗ್ರೇಡ್ 2 ಹುದ್ದೆಗಳು ಇವಾಗಿದ್ದು, ದೇಶದೆಲ್ಲೆಡೆ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 10, ಕಡೆಯ ದಿನವಾಗಿದೆ.
ಹುದ್ದೆ ವಿವರ: ಕೇಂದ್ರ ಗುಪ್ತಚರ ಇಲಾಖೆಯಲ್ಲಿ 3,717 ಅಸಿಸ್ಟಂಟ್ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ (ಎಸಿಐಒ) ಗ್ರೇಡ್ 2/ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷಗಳನ್ನು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ವೇತನ: ಈ ಹುದ್ದೆಗೆ 44,900-1,42,400 ರೂ. ಮಾನಸಿಕ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಪ್ರಕ್ರಿಯೆ ಶುಲ್ಕ 450 ರೂ. ಅನ್ನು ಎಲ್ಲ ಅಭ್ಯರ್ಥಿಗಳು ಭರಿಸಬೇಕಿದೆ. ಇನ್ನು ಪರೀಕ್ಷೆ ವೆಚ್ಚ 100 ರೂ. ಆಗಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸರಿಯಾಗಿ ಓದಿ ಅರ್ಥೈಸಿಕೊಂಡು ಮುಂದುವರೆಯಬೇಕು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ ಮತ್ತು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದು. ಈ ಹುದ್ದೆಗೆ ರಾಜ್ಯದ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಈ ಕೇಂದ್ರದಲ್ಲಿ ಈ ಹುದ್ದೆಗೆ ಪರೀಕ್ಷೆ ನಡೆಯಲಿದೆ.
ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 10 ಆಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ mha.gov.in ಅಥವಾ nsc.gov.in ಇಲ್ಲಿಗೆ ಭೇಟಿ ನೀಡಬಹುದು.

