ಕಲಬುರಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಸಹಾಯಕರ ಹುದ್ದೆಗೆ ಅಂದರೆ ಫೋಟೋಗ್ರಫಿ ಮತ್ತು ಎಡಿಟಿಂಗ್ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಾಕ್-ಇನ್​ ಇಂಟರ್​​ವ್ಯೂ ಮೂಲಕ ಈ ಹುದ್ದೆ ಭರ್ತಿ ಮಾಡಲಾಗುತ್ತಿದ್ದು, ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ನೇಮಕಾತಿ ನಡೆಯಲಿದೆ. ಈ ಹುದ್ದೆಗೆ ನೇರ ಸಂದರ್ಶನ ಜುಲೈ 15ರಂದ ನಡೆಯಲಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸಮೂಹ ಸಂವಹನ, ಫೋಟೋಗ್ರಾಫಿ ಅಥವಾ ಟೆಲಿವಿಷನ್​ ಪ್ರೊಡಕ್ಷನ್‌ನಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 20 ಹಾಗೂ ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು. ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 30 ಸಾವಿರ ರೂ ಮಾಸಿಕ ವೇತನ ನಿಗದಿಸಲಾಗಿದೆ.

ಜುಲೈ 15ರಂದು ಬೆಳಗ್ಗೆ 11.30ಕ್ಕೆ ಈ ಹುದ್ದೆಗಳಿಗೆ ವಾಕ್​ ಇನ್​ ಇಂಟರ್​ವ್ಯೂ ನಡೆಯಲಿದ್ದು, ಅಧಿಸೂಚನೆ ಜೊತೆಗೆ ನೀಡಲಾಗಿರುವ ನಿಗದಿತ ಅರ್ಜಿ ಭರ್ತಿ ಮಾಡಿ ಅಭ್ಯರ್ಥಿಗಳು ಅಗತ್ಯ ದಾಖಲಾತಿ ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕಿದೆ.

ನೇರ ಸಂದರ್ಶನ ನಡೆಯುವ ಸ್ಥಳ: ರಿಜಿಸ್ಟ್ರರ್​​, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರ್ಗಿ, ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cuk.ac.in ಭೇಟಿ ನೀಡಿ.