ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಭ್ಯರ್ಥಿಗಳು ಇದೇ ಜುಲೈ 25, 2024 ಅಂದರೆ ನಾಳೆಯೊಳಗೆ ಅರ್ಜಿ ಹಾಕಿ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್ ಎಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್​ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 31, 2024ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 20,000

ಉದ್ಯೋಗದ ಸ್ಥಳ:
ಧಾರವಾಡ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಶಾರ್ಟ್​ಲಿಸ್ಟಿಂಗ್
ಟೆಸ್ಟ್
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 25, 2024(ನಾಳೆ)